Veteran Kannada Director S Siddalingaiah `Hospitalized`, KFCC Officials Visit Hospital

TV9 Kannada 2015-03-06

Views 7

TV9 News: Veteran Kannada Director S Siddalingaiah `Hospitalized`, KFCC Officials Visit Hospital....,

ಹಿರಿಯ ಚಿತ್ರ ನಿರ್ದೇಶಕ ಎಸ್ ಸಿದ್ದಲಿಂಗಯ್ಯ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಸಿದ್ಧಲಿಂಗಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಭೂತಯ್ಯನ ಮಗ ಅಯ್ಯು, ಬಂಗಾರದ ಮನುಷ್ಯ, ಅಜಯ್, ಹೇಮಾವತಿ, ದೂರದ ಬೆಟ್ಟ, ಮೇಯರ್ ಮುತ್ತಣ್ಣ, ಪ್ರೇಮ ಪರ್ವ ಸೇರಿದಂತೆ 20ಕ್ಕೂ ಹೆಚ್ಚು ಚಿತ್ರಗಳನ್ನು ಸಿದ್ಧಲಿಂಗಯ್ಯ ನಿರ್ದೇಶಿಸಿದ್ದಾರೆ. ಸಿದ್ಧಲಿಂಗಯ್ಯ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಸಿದ್ಧಲಿಂಗಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Share This Video


Download

  
Report form