After his discharge from SDM hospital, Dharwad, Ravi Belagere rush to an anonymous place. Meanwhile, Bengaluru police who were here to arrest him soon after his discharge returned back with empty hands as per the government's revised instruction.
ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆಗಳ ಸಮಿತಿಯಿಂದ ಶಿಕ್ಷೆಗೆ ಗುರಿಯಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ರವಿ ಬೆಳಗೆರೆ ಸೋಮವಾರ ಬೆಳಗಿನ ಜಾವ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಅಜ್ಞಾನ ಸ್ಥಳಕ್ಕೆ ತೆರಳಿರುವ ಅವರು, ವೈದ್ಯರ ಸಲಹೆ ಮೇರೆಗೆ ಔಷಧೋಪಚಾರ ಮುಂದುವರಿಸಲು ನಿರ್ಧರಿಸಿದ್ದಾರೆಂದು ಹೇಳಲಾಗಿದೆ.