The special investigation team has received the postmortem report of National-level Badminton player Kavya Poojary of alvas school who was found hanged on July 20.
ರಾಜ್ಯಾದ್ಯಂತ ಸುದ್ದಿಯಾಗಿರುವ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಅವರ ಆತ್ಮಹತ್ಯೆ ಮರಣೋತ್ತರ ಪರೀಕ್ಷೆಯ ವರದಿ ಇದೀಗ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿರಿಯ ಅಧಿಕಾರಿಗಳೊಂದಿಗೆ ವರದಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.