ಇತ್ತೀಚೆಗೆ ಹತ್ಯೆಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ 'ಕಾವೇರಿ'ಯಲ್ಲಿ, ತಮ್ಮ ಪುತ್ರಿಯ ಹತ್ಯೆಗೆ ಕಾರಣವಾದ ಆರೋಪಿಗಳನ್ನು ಹಿಡಿದು ಅವರಿಗೆ ಶಿಕ್ಷೆ ಕೊಡಿಸುವ ಮೂಲಕ ತಮ್ಮ ಪುತ್ರಿಯ ಸಾವಿಗೆ ನ್ಯಾಯಸಿಗುವಂತೆ ಮಾಡಬೇಕೆಂದು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು