ಯಾವ ವಿಧಾನಸಭಾ ಚುನಾವಣೆಗೂ ಕಮ್ಮಿಯಿಲ್ಲದಂತೇ ನಡೆಯುವ ದೆಹಲಿಯ ಜವಾಹರಲಾಲ್ ನೆಹರೂ ಯುನಿವರ್ಸಿಟಿಯ (JNU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಂದಿನಂತೇ ಎಡಪಕ್ಷಗಳ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಆದರೆ, ಈ ವಿಶ್ವವಿದ್ಯಾಲಯದಲ್ಲಿ ಬಿಜಿಪಿಯ ವಿದ್ಯಾರ್ಥಿ ಘಟಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತನ್ನ ನೆಲೆಯನ್ನು ಕಂಡುಕೊಳ್ಳುತ್ತಿರುವುದಕ್ಕೆ ಸಾಕ್ಷಿ ಎನ್ನುವಂತೆ ಎಡಪಕ್ಷಗಳ ಅಭ್ಯರ್ಥಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.