ಚಿಕ್ಕಮಗಳೂರಿನಲ್ಲಿ 'Helping Wall' ಎಂಬ ನೂತನ ಯೋಜನೆಯನ್ನು ಆರಂಭಿಸಲಾಗಿದೆ. ಬಡವರು ಮತ್ತು ಅವಶ್ಯಕತೆ ಇರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಮತ್ತು Credence Helping Hands ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಇದನ್ನು ಜಾರಿಗೆ ತರಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಕಟ್ಟಡದ ಮುಂಭಾಗದಲ್ಲಿ 'Helping Wall' ನಿರ್ಮಿಸಲಾಗಿದೆ...