ಬೆಂಗಳೂರು, ನವೆಂಬರ್ 1 : 'ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶೇ 5ರಷ್ಟು ಮೀಸಲಾತಿ, ಖಾಸಗಿ ಕ್ಷೇತ್ರದ ಉದ್ಯಮಗಳಲ್ಲಿಯೂ ಸಿ ಮತ್ತು ಡಿ ವರ್ಗದ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ' ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕಾಶವಾಣಿಯಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಇಂದು ಬೆಳಗ್ಗೆ ಭಾಷಣ ಮಾಡಿದರು. ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
'ಕರ್ನಾಟಕದ ನೆಲದಲ್ಲಿ ವಾಸಿಸುತ್ತಿರುವ ಎಲ್ಲರೂ ಕನ್ನಡಿಗರು ಎಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಹಾಗೆಯೇ ನಡೆದುಕೊಂಡಿದ್ದೇವೆ. ಇದಕ್ಕಾಗಿಯೇ ಇದು ಕನ್ನಡ ರಾಜ್ಯದ ಉತ್ಸವ. ಕನ್ನಡಿಗರ ಉತ್ಸವ' ಎಂದು ಹೇಳಿದರು.
ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶೇ 5 ಐದರಷ್ಟು ಮೀಸಲಾತಿ, ಖಾಸಗಿ ಕ್ಷೇತ್ರದ ಉದ್ಯಮಗಳಲ್ಲಿಯೂ ಸಿ ಮತ್ತು ಡಿ ವರ್ಗದ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ.