ಮಂಡ್ಯದಲ್ಲಿ ರಮ್ಯಾ ಹಾಗು ಅಂಬರೀಷ್ ನಡುವಿನ ಸಂಘರ್ಷ ತಾರಕಕ್ಕೆ | Oneindia Kannada

Oneindia Kannada 2017-11-14

Views 1

Former MP Ramya is getting ready to win over Amabreesh’s Mandya constituency. Former minister Ambareesh may join JDS. Here are the updates of Mandya district politics ahead of Karnataka assembly elections 2018.


ಮಂಡ್ಯ ರಾಜಕಾರಣ, ಹೊಸ ಸುದ್ದಿಯೊಂದು ತೇಲಿಬಂತು! ಮಂಡ್ಯ ಜಿಲ್ಲೆಯ ರಾಜಕಾರಣ ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯನ್ನು ಕೈವಶ ಮಾಡಿಕೊಳ್ಳಲು ಜೆಡಿಎಸ್ ದಾಳ ಉರುಳಿಸುತ್ತಿದ್ದು, ಕಾಂಗ್ರೆಸ್‌ ಆಂತರಿಕ ಕಚ್ಚಾಟವೇ ಪಕ್ಷದ ಹಿನ್ನಡೆಗೆ ಕಾರಣವಾಗುವ ಸಾಧ್ಯತೆ ಇದೆ. ಮಾಜಿ ಸಚಿವ ಅಂಬರೀಶ್, ಮಾಜಿ ಸಂಸದೆ ರಮ್ಯಾ ನಡುವಿನ ಭಿನ್ನಮತ ಜಿಲ್ಲೆಯಲ್ಲಿ ಕಾಂಗ್ರೆಸ್ ಪಾಲಿಗೆ ನುಂಗಲಾರದ ತುತ್ತಾಗಿದೆ. ಈಗ ಚುನಾವಣೆ ಸಮೀಪವಾಗುತ್ತಿದ್ದು, ಜಿಲ್ಲೆಯಲ್ಲಿ ಪಕ್ಷವನ್ನು ಯಾರು ಮುನ್ನೆಡೆಸುತ್ತಾರೆ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಚುನಾವಣೆಯಲ್ಲಿ ಗೆದ್ದ ಬಳಿಕ ಕ್ಷೇತ್ರದಿಂದ ದೂರವಾಗಿದ್ದಾರೆ. ಮಾಜಿ ಸಂಸದೆ ರಮ್ಯಾ ಮೇಲೆಯೂ ಇದೇ ಆರೋಪಗಳು ಕೇಳಿಬರುತ್ತಿವೆ. 2014ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ಕ್ಷೇತ್ರದಿಂದ ಬಹುದೂರ ಸಾಗಿದ್ದಾರೆ.2018ರ ಚುನಾವಣೆಯಲ್ಲಿ ರಮ್ಯಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅಂಬರೀಶ್ ಜೆಡಿಎಸ್ ಸೇರಲಿದ್ದಾರೆ ಎಂಬ ಗುಸು-ಗುಸು ಹರಿದಾಡುತ್ತಿದೆ. ಅತ್ತ ಜೆಡಿಎಸ್ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಕಾಂಗ್ರೆಸ್ ಸೇರಿ ಜಿಲ್ಲೆಯ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ...

Share This Video


Download

  
Report form
RELATED VIDEOS