ಕರ್ನಾಟಕ ಚುನಾವಣೆ 2018 : ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬಂಡಾಯದ ಬಿಸಿ

Oneindia Kannada 2017-11-23

Views 352

JDS is now facing rebel trouble at Chamaraja constituency, Mysuru. Party announced Prof K.S.Rangappa as assembly elections 2018 candidate for constituency. Mysuru city party president K Harish Gowda opposed for party move.

ಮೈಸೂರು : ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ! ಚುನಾವಣೆ ದಿನಾಂಕ ನಿಗದಿಗೂ ಮೊದಲೇ ಅಭ್ಯರ್ಥಿ ಘೋಷಿಸಿದ ಜೆಡಿಎಸ್‌ ಪಕ್ಷಕ್ಕೆ ಅಸಮಾಧಾನದ ಬಿಸಿ ತಟ್ಟಿದೆ. ಮೈಸೂರಿನ ಚಾಮರಾಜ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪಕ್ಷ ಘೋಷಣೆ ಮಾಡಿತ್ತು. ಭಾನುವಾರ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ 'ಕುಮಾರಪರ್ವ ಸಮಾವೇಶ' ನಡೆಯಿತು. ಸಮಾವೇಶದಲ್ಲಿ ಕ್ಷೇತ್ರದ ಮುಂದಿನ ಚುನಾವಣೆ ಅಭ್ಯರ್ಥಿ ಪ್ರೊ.ಕೆ.ಎಸ್.ರಂಗಪ್ಪ ಎಂದು ಘೋಷಣೆ ಮಾಡಲಾಗಿದೆ.ಪಕ್ಷದ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆಯೇ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಕೆ.ಹರೀಶ್ ಗೌಡ ಅಸಮಾಧಾನಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸವಾಲು ಹಾಕುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.ಕೆ.ಜಿ.ಕೊಪ್ಪಲಿನಲ್ಲಿ ಸಭೆ ನಡೆಸಿದ ಹರೀಶ್ ಗೌಡ ಅವರ ಬೆಂಬಲಿಗರು ಹರೀಶ್ ಗೌಡ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡದಿದ್ದರೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Share This Video


Download

  
Report form
RELATED VIDEOS