ಚೆನ್ನೈ, ನವೆಂಬರ್ 30 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಓಖಿ ಚಂಡಮಾರುತದಿಂದ ಚೆನ್ನೈ ತತ್ತರಿಸಿದೆ. ಪ್ರಮುಖವಾಗಿ ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಟೆಗೆ ಸುಮಾರು 150 ಕಿ.ಮೀ ವೇಗದಲ್ಲಿ ಓಖಿ ಚಂಡಮಾರುತ ಲಕ್ಷದ್ವೀಪದತ್ತ ಧಾವಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ತುಂತುರು ಮಳೆ ಹಾಗೆಯೇ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ನೆರಚ್ಚರಿಕೆಯನ್ನೂ ರವಾನಿಸಿದೆ .ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಹಲವೆಡೆ ಗುರುವಾರ ಹಾಗೂಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಈಗಾಗಲೇ ತಮಿಳುನಾಡಿನ ಟುಟಿಕಾರನ್, ತಿರುನೆಲ್ವೇಲಿ, ಕನ್ಯಾಕುಮಾರಿ, ವಿರುದುನಗರ್ ಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆ ಪೀಡಿತ ಈ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಂಡಮಾರುತದ ಪ್ರಮಾಣ ಮುಂದಿನ 48 ಗಂಟೆ : ಶುಕ್ರವಾರ (ಡಿ.1) ರಂದು ಲಕ್ಷದ್ವೀಪದಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಹಾಗೂ ಕೇರಳದ ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ತಮಿಳುನಾಡು ಹಾಗೂ ಕರ್ನಾಟಕದ ಉತ್ತರ ಭಾಗ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
The state of Tamilnadu at present heavy rains falls were witnessed.India Meteorological Department has issued a cyclone warning for lakshadveep, kerala and tamil Nadu. watch this video