As the election heat in Karnataka is gradually building up, there is already talk on a coalition government. Several surveys have predicted a hung assembly. The big question is can the JD(S) be ignored?. There is a clear indication that the JD(S) will be a major player in the formation of the next Karnataka government in 2018.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ಬಗ್ಗೆ ಚರ್ಚೆ ಆರಂಭವಾಗಿದೆ. ಇದುವರೆಗೂ ನಡೆದ ಸಮೀಕ್ಷೆಗಳು ಸಹ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೇಳಿವೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸದ್ಯದ ಪ್ರಶ್ನೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗಂಭೀರವಾಗಿ ಪರಿಗಣಿಸಬೇಕೆ? ರಾಜ್ಯದ ಸದ್ಯದ ರಾಜಕೀಯ ಚಿತ್ರಣವನ್ನು ನೋಡಿದರೆ 2018ರ ಚುನಾವಣೆ ಬಳಿಕ ಸರ್ಕಾರ ರಚನೆ ಮಾಡುವಲ್ಲಿ ಜೆಡಿಎಸ್ ಮಹತ್ವದ ಪಾತ್ರವನ್ನು ವಹಿಸಲಿದೆ. ಸಮೀಕ್ಷೆಯಲ್ಲಿ ಹೇಳಿರುವುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಕ್ಷಗಳಿಸಲಿದೆ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ.ವಿಧಾನಸಭೆ ಚುನಾವಣಗೆ ಜೆಡಿಎಸ್ ಪಕ್ಷ ಭರ್ಜರಿಯಾಗಿ ಪ್ರಚಾರ ಆರಂಭಿಸಿದೆ. ಪಕ್ಷದ ಹಿಡಿತ ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಭಾಗದತ್ತ ಪಕ್ಷ ಹೆಚ್ಚಿನ ಗಮನವನ್ನು ಹರಿಸಿದೆ....