113 ಸೀಟುಗಳನ್ನು ಗೆಲ್ಲಿಸುವ ಗುರಿ ಇಟ್ಟು ಪಕ್ಷದ ಸಂಘಟನೆ ಮಾಡುತ್ತಿದ್ದೇನೆ - ಎಚ್ಡಿಕೆ | Oneindia Kannada

Oneindia Kannada 2018-01-05

Views 1.7K

ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ. 113 ಸೀಟುಗಳನ್ನು ಗೆಲ್ಲಿಸುವ ಗುರಿ ಇಟ್ಟು ಪಕ್ಷದ ಸಂಘಟನೆ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಭಾವಿ ಹಾಗು ದೊಡ್ಡ ದೊಡ್ಡ ನಾಯಕರ ಮನೆ ಬಾಗಿಲು ಕಾಯದೆ, ಕೆಳಹಂತದ ನಾಯಕರನ್ನು ಗುರುತಿಸಿ ಅವರಿಗೆ ಟಿಕೆಟ್ ಕೊಡುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಬೆಳಗಾವಿಯಲ್ಲಿ ಶುಕ್ರವಾರ ಹೇಳಿದರು. ಸಿದ್ದರಾಮಯ್ಯ ಪ್ರತಿಯೊಂದು ಕಾರ್ಯಕ್ರಮದಲ್ಲಿ, 'ಅವರಪ್ಪನ ಮೇಲೆ ಆಣೆ ಅವರು ಸರ್ಕಾರ ರಚಿಸಲ್ಲ' ಅಂತ ಹೇಳ್ತಾರೆ. ನಮ್ಮಪ್ಪಂದಿರೇನು ಇವರಿಗೆ ಬಿಟ್ಟಿ ಸಿಕ್ಕಿದ್ದಾರಾ? ಬೇಕಾದ್ರೆ ಸಿಎಂ ಅವರಪ್ಪನ ಮೇಲೆ ಆಣೆ ಹಾಕೊಳ್ಳಿ ಎಂದು ಕುಮಾರಸ್ವಾಮಿ ಸಿಎಂ ಸಿದ್ರಾಮಯ್ಯನವರಿಗೆ ತಿರುಗೇಟು ನೀಡಿದರು. ಸರ್ಕಾರ ರಾಜ್ಯದ ಜನರಿಗೆ ಅನ್ನಭಾಗ್ಯ ನೀಡಿ, ಮದ್ಯದ ದರ ಹೆಚ್ಚಿಸಿ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
HD Kumaraswamy has clearly said that they are not joining hands with either BJP or Congress and are aiming to win 113 seats on their own.

Share This Video


Download

  
Report form
RELATED VIDEOS