BJP leader and former member of Parliament C H Vijayashankar will officially join Congress on Jan 19th in presence of chief minister Siddaramaiah, in Bengaluru.
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜನವರಿ 19ರಂದು ನಾನು ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಮಾಜಿ ಸಂಸದ, ಬಿಜೆಪಿ ಮುಖಂಡ ಸಿ.ಹೆಚ್ ವಿಜಯ ಶಂಕರ್ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ವಿಜಯಶಂಕರ್ ಅವರು, ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ್ದೇನೆ. ಬೆಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಸಿಎಂ ಸಮ್ಮುಖದಲ್ಲಿ ಜ.19 ರಂದು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ನನ್ನ ಜತೆ ಹಲವು ಬೆಂಬಲಿಗರೂ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಯಾವುದೇ ಷರತ್ತುಗಳಿಲ್ಲದೆ ಸೇರಿಕೊಳ್ಳುತ್ತಿದ್ದೇನೆ. ಜ. 19 ರಂದು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರುತ್ತೇನೆ. ಹಾಗೆಯೇ ಅಂದು ಏತಕ್ಕಾಗಿ ಬಿಜೆಪಿ ತೊರದೆ ಎಂಬುದನ್ನು ತಿಳಿಸುತ್ತೇನೆ. ಜತೆಗೆ ಕೆಲವರ ಮುಖವಾಡವನ್ನೂ ಸಹ ಬಯಲು ಮಾಡುತ್ತೇನೆ ಎಂದು ವಿಜಯ್ ಶಂಕರ್ ಹೇಳಿದ್ದಾರೆ.