ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶಿಸಿ ಕಾಂಗ್ರೆಸ್ ಗೆ ತನ್ನ ತಾಕತ್ತೇನು ಎಂಬುದನ್ನು ತೋರಿಸಲು ಶಾಸಕ ಸಿ.ಪಿ.ಯೋಗೇಶ್ವರ್ ಮುಂದಾಗಿದ್ದಾರೆ.
ಕೆಲವು ದಿನಗಳ ಹಿಂದೆ ನಡೆದ ಸರ್ಕಾರದ ಸಾಧನಾ ಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಸಿ.ಪಿ.ಯೋಗೇಶ್ವರ್ ಅವರನ್ನು ವಾಚಾಮಗೋಚರವಾಗಿ ತೆಗಳಿದ್ದರು. ಇದಕ್ಕೆ ಉತ್ತರ ಕೊಡಲು ತಯಾರಿ ನಡೆಸಿರುವ ಯೋಗೇಶ್ವರ್ , ಇಂದು (ಜ.17) ಚನ್ನಪಟ್ಟಣದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಉತ್ತರ ಕೊಡಲು ಸಿದ್ಧತೆ ನಡೆಸಿದ್ದಾರೆ.
ರಾಜಕೀಯ ಪಕ್ಷಗಳ ಬ್ಯಾನರ್‍ನಡಿ ಮಾತ್ರವಲ್ಲದೆ, ಪಕ್ಷೇತರವಾಗಿ ಸ್ಪರ್ಧಿಸಿದರೂ ಗೆಲುವು ಪಡೆಯುವ ತಾಕತ್ತು ಹೊಂದಿರುವ ಯೋಗೇಶ್ವರ್ ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡು ಗೆಲುವು ಸಾಧಿಸಿದ್ದರು.
ಆದರೆ ಕೆಲವು ಸಮಯಗಳ ಹಿಂದೆ ಕಾಂಗ್ರೆಸ್ ನೊಂದಿಗೆ ಸಂಬಂಧ ಕಡಿದುಕೊಂಡು ಬಿಜೆಪಿ ಸಖ್ಯ ಬೆಳೆಸಿರುವ ಅವರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಆಕ್ರೋಶವಿತ್ತು.
Former congress leader C P Yogeshwar who joined BJP recently, will be showing his political power to Congress leaders in BJP Parivarthana rally. Rally will be coming to Channapatna assembly constituency in Ramanagara district on Jan 17th.