ಅಮಿತ್ ಶಾ ಕರ್ನಾಟಕ ಬಿಜೆಪಿ ನಾಯಕರನ್ನ ದೆಹಲಿಗೆ ತುರ್ತು ಸಭೆ ಕರೆದಿದ್ಯಾಕೆ? | Oneindia Kannada

Oneindia Kannada 2018-01-29

Views 392

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಬಿಜೆಪಿ ನಾಯಕರ ತುರ್ತು ಸಭೆ ಕರೆದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸಭೆ ನಡೆಯಲಿದೆ.

ಸೋಮವಾರ ಬೆಳಗ್ಗೆ ತುರ್ತಾಗಿ ಅಮಿತ್ ಶಾ ಸಭೆ ಕರೆದಿದ್ದಾರೆ. ಇಂದು ಸಂಜೆ 8 ಗಂಟೆಗೆ ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಸಭೆ ನಡೆಯಲಿದೆ. ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಯಲ್ಲಿಯೇ ಇದ್ದಾರೆ. ಸಂಸತ್ ಅಧಿವೇಶನ ನಡೆಯುತ್ತಿದೆ. ಅನಂತ್ ಕುಮಾರ್, ಪ್ರಹ್ಲಾದ್ ಜೋಶಿ ಅವರು ದೆಹಲಿಯಲ್ಲಿ ಇದ್ದಾರೆ. ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಮುಂತಾದ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಬಿಜೆಪಿಯ ಪರಿವರ್ತನಾ ಯಾತ್ರೆ ಮುಕ್ತಾಯಗೊಂಡಿದ್ದು ಫೆ.4ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಅರಮನೆ ಮೈದಾನಲ್ಲಿ ನಡೆಯುವ ಸಮಾವೇಶದ ಸಿದ್ಧತೆ, ಚುನಾವಣಾ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲು ಅಮಿತ್ ಶಾ ಸಭೆ ಕರೆದಿದ್ದಾರೆ. ಬಿಜೆಪಿ ಈ ಸಮಾವೇಶವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

BJP chief Amit Shah called Karnataka party leaders meeting on January 29, 2018. Meeting will be held at Amit Shah residence New Delhi. Meeting called to discuss preparations for Prime Minister Narendra Modi rally in Bengaluru on February 4th.

Share This Video


Download

  
Report form
RELATED VIDEOS