JD(S) and Congress direct fight expected in Chamarajapet assembly constituency, Bengaluru. Sitting MLA B.Z.Zameer Ahmed Khan may contest form Congress. Imran Pasha may get JD(S) ticket. Lahari Velu, B.V.Ganesh name in the race for BJP ticket.
ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧ ಕಟ್ಟಿಕೊಂಡಿರುವ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸುವರೇ ಕಾದು ನೋಡಬೇಕು. ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಜೆಡಿಎಸ್‌ನಿಂದ ಅಮಾನತುಗೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸುತ್ತಿದ್ದು, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.