Laxmi Ravindra Hebbalkar works as president of Karnataka Pradesh Congress Committee Women's wing from Friday, June 12, 2015, here is her brief profile.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಹೆಬ್ಬಾಳ್ಕರ್ ಅವರನ್ನು ಮೇ ತಿಂಗಳಿನಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಪದವೀಧರೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕರ್ನಾಟಕ ಮಹಿಳಾ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿರುವ ಹೆಬ್ಬಾಳ್ಕರ್ ಅವರು ಯುವ ಕಾಂಗ್ರೆಸ್ ಮತ್ತು ಕೆಪಿಸಿಸಿಯ ಹಲವಾರು ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಕ್ರಿಯರಾಗಿ ದುಡಿದಿದ್ದಾರೆ.