Karnataka Pradesh Congress Committee (KPCC) president G.Parameshwara expelled Afzalpur MLA Malikayya Guttedar from party for 6 years. After meeting with Karnataka BJP state president B.S.Yeddyurappa Malikayya Guttedar announced that he will quit Congress and join BJP.
ಅಫ್ಜಲ್ಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವುದಾಗಿ ಗುರುವಾರ ಅವರು ಘೋಷಣೆ ಮಾಡಿದ್ದರು. ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರು ಮಾಲೀಕಯ್ಯ ಗುತ್ತೇದಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೊದಲೇ ಅವರು ಉಚ್ಚಾಟನೆಗೊಂಡಂತಾಗಿದೆ.