ತನ್ನ ನೇರ, ನಿಷ್ಠುರ ನುಡಿಯಿಂದ ಸದಾ ಸುದ್ದಿಯಲ್ಲಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಕ್ಷೇತ್ರದ ವ್ಯಾಪ್ತಿಗೆ ಬರುವ ಅಸೆಂಬ್ಲಿ ಕ್ಷೇತ್ರದಲ್ಲೆಲ್ಲಾ ಸುತ್ತಾಡಿ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ, ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ಅಸೆಂಬ್ಲಿ ಕ್ಷೇತ್ರಗಳಾದ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಗಳಲ್ಲಿ ಬಿಜೆಪಿ ಪರ ಮತಯಾಚಿಸುವಲ್ಲಿ ಪ್ರತಾಪ್ ಸಿಂಹ ಬ್ಯೂಸಿಯಾಗಿದ್ದಾರೆ.
https://kannada.oneindia.com/elections/an-exclusive-interview-with-mysuru-mp-pratap-simha-139905.html