2008ರಲ್ಲಿ ತುರುವೇಕೆರೆ ಅಸೆಂಬ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟಿನಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ಜಗ್ಗೇಶ್, ಆನಂತರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯನ್ನು ಸೇರಿದ್ದರು. ಇದಾದ ನಂತರ ವಿಧಾನಪರಿಷತ್ ಸದಸ್ಯರಾಗಿ ಜೊತೆಗೆ, ಬಿಜೆಪಿ ಸರಕಾರದ ಅವಧಿಯಲ್ಲಿ ಕರ್ನಾಟಕ ರಸ್ತೆಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಸದ್ಯ, ಬೆಂಗಳೂರು ನಗರ ವ್ಯಾಪ್ತಿಯ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗ್ಗೇಶ್ ಅವರಿಗೆ ಕೊನೇ ಗಳಿಗೆಯಲ್ಲಿ ಟಿಕೆಟ್ ಘೋಷಣೆಯಾಗಿತ್ತು. ಅವರೇ ಹೇಳುವಂತೆ, ಬಿಜೆಪಿ ಟಿಕೆಟ್ ಬಯಸದೇ ಬಂದದ್ದು.