Speaking to media persons in Mangaluru PWD Minister HD Revanna said that there is no confusion between Chief Minister HD Kumaraswamy and former CM Siddaramaiah about presenting state budget.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಾರ್ಮಾಡಿ ಘಾಟ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಕೇಂದ್ರ ಸರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. "ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಲಿರುವ ಬಜೆಟ್ ಬಗ್ಗೆ ಸಿದ್ದರಾಮಯ್ಯನರಿಗೆ ಯಾವುದೇ ಅಸಮಾಧಾನವಿಲ್ಲ. ಬಜೆಟ್ ಮಂಡನೆಗೆ ಅವರು ಸಮ್ಮತಿಸಿದ್ದಾರೆ," ಎಂದು ಹೇಳಿದರು.