Karnataka Budget 2018-19 : All eyes are again on Chief Minister and Finance Minister HD Kumaraswamy with many more expectations. Kumaraswamy will preset first budget on Thursday, July 05, 2018. But why Thursday?
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊಟ್ಟ ಮೊದಲ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಕಮ್ ವಿತ್ತ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ಧರಾಗಿದ್ದಾರೆ. 2018-19ನೇ ಸಾಲಿನಲ್ಲಿ ಇದು ಕರ್ನಾಟಕ ಕಾಣಲಿರುವ ಎರಡನೇ ಬಜೆಟ್ ಇದಾಗಲಿದೆ. ವಿಧಾನ ಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 6ನೇ ಬಾರಿ, ಹಣಕಾಸು ಸಚಿವರಾಗಿ 13ನೇ ಬಾರಿ ಬಜೆಟ್ ಮಂಡಿಸಿದ್ದರು. ಈಗ ಗುರುವಾರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಅಧಿವೇಶನದಲ್ಲಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಆದರೆ ಗುರುವಾರಾನೇ ಯಾಕೆ?