ಮಂಗಳೂರು, ಜುಲೈ 7: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪುತ್ತೂರಿನಲ್ಲಿ ಮನೆ ಗೋಡೆ ಕುಸಿದು ಬಿದ್ದು ಅಜ್ಜಿ ಮತ್ತು ಮೊಮ್ಮಗ ಬಲಿಯಾಗಿದ್ದಾರೆ. ಶುಕ್ರವಾರ ಮುಂಜಾನೆಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.