ರಾಯಚೂರು, ಆಗಸ್ಟ್.02: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಆಗ್ರಹಿಸಿ ನಡೆಯುತ್ತಿರುವ ಬಂದ್ ಗೆ ಬಿಸಿಲನಾಡು ರಾಯಚೂರಿನಲ್ಲಿ ಯಾವುದೇ ಪ್ರತಿಕ್ರಿಯೆ ಕಂಡು ಬಂದಿಲ್ಲ. ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟಕ್ಕೂ ನಮಗೂ ಯಾವುದೇ ಸಂಬಂಧವಿಲ್ಲದಂತೆ ಕಂಡು ಬರುತ್ತಿದೆ. ಎಂದಿನಂತೆ ಜನ-ಜೀವನ ಸಾಗಿದ್ದು, ಅಂಗಡಿ ಮುಗ್ಗಟ್ಟು, ವ್ಯಾಪಾರ ವಹಿವಾಟು ಆರಂಭಿಸಿವೆ. ಅಷ್ಟೇ ಅಲ್ಲದೇ ಇಡೀ ಹೈದ್ರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬೆಂಬಲ ಸಿಕ್ಕಿಲ್ಲ. ಇನ್ನು ಹೈದ್ರಾಬಾದ್ ಕರ್ನಾಟಕ ಭಾಗದಲ್ಲೇ ಎರಡನೇ ರಾಜಧಾನಿ ಮಾಡಬೇಕು ಹಾಗೂ ಸಮರ್ಪಕವಾಗಿ 371 ಜೆ ಕಲಂ ಜಾರಿಗೆ ಆಗ್ರಹಿಸಿ ನಗರದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು.