Bharat Bandh : ಬಾಗಲಕೋಟೆಯಲ್ಲಿ ಜಯ ಕರ್ನಾಟಕದ ಸಂಘದಿಂದ ವಿನೂತನ ಪ್ರತಿಭಟನೆ | Oneindia Kannada

Oneindia Kannada 2018-09-10

Views 31

Congress and other opposition parties call Bharat Bandh to oppose petrol and diesel price hike. Besides condemning the fuel price hike, the bandh is being held to demand a Joint Parliamentary Committee (JPC) to probe the rupee all the time against the dollar and investigate the Rafael deal, which has been tightened across the country. Various organizations protests in Bagalkot condemning fuel price hike.


ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಇಂದು(ಸೆ.10) ಭಾರತ್ ಬಂದ್ ಕರೆ ನೀಡಿವೆ. ತೈಲ ಬೆಲೆ ಏರಿಕೆ ಖಂಡಿಸಿ ಮಾತ್ರವಲ್ಲದೆ, ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಪತನ ಕಾಣುತ್ತಿರುವುದು ಮತ್ತು ರಫೆಲ್ ಡೀಲ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸಲು ಒತ್ತಾಯಿಸಿ ಬಂದ್ ಆಚರಿಸಲಾಗುತ್ತಿದ್ದು, ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಗಲಕೋಟೆ-ಪೆಟ್ರೋಲ್ ಡಿಸೇಲ್ ಸೇರಿದಂತೆ ಇಂಧನ ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಭಾರತ ಬಂದ್ ಹಿನ್ನಲೆಯಲ್ಲಿ ಜಿಲ್ಲೆ ಯ ಶಾಲಾ ಕಾಲೇಜಗಳಿಗೆ ರಜೆ ನೀಡಲಾಗಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯವರು ಟಂಟಂ ಗಾಡಿಯನ್ನು ಟಾಂಗಾಕ್ಕೆ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.ಎತ್ತಿನ ಗಾಡಿಯಲ್ಲಿ ಹತ್ತಿ ಪ್ರತಿಭಟನೆ ನಡೆಸಿದ ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.

Share This Video


Download

  
Report form
RELATED VIDEOS