Chief Minister Kumaraswamy in Kalburgi today announced slash in price of Petrol by Rs 2.
ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿನ ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಸದ ಸುದ್ದಿ ಕೊಟ್ಟಿದ್ದಾರೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 2 ರು ಇಳಿಸಲಾಗಿದೆ ಎಂದು ಕುಮಾರಸ್ವಾಮಿ ಘೋಷಿಸಿದರು. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶ ಹೊರಬೀಳಬೇಕಿದೆ.