Even after UPA chair person Sonia Gandhi rally, Congress facing humiliating defeat in Telangana assembly elections 2018. Sonia Gandhi's speech did not work out in Telangana
ಪಂಚ ರಾಜ್ಯಗಳ ಅಸೆಂಬ್ಲಿ ಚುನಾವಣಾ ಫಲಿತಾಂಶ ಒಂದೊಂದಾಗಿಯೇ ಹೊರಬೀಳುತ್ತಿದೆ. ಸದ್ಯದ ಟ್ರೆಂಡಿಂಗ್ ಪ್ರಕಾರ, ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ ಎಸ್) ಅಭೂತಪೂರ್ವ ಜಯದತ್ತ ದಾಪುಗಾಲು ಹಾಕುತ್ತಿದೆ. ತೆಲಂಗಾಣ ಪ್ರತ್ಯೇಕ ರಾಜ್ಯದ ಕಾರಣಕರ್ತೆ ಎಂದು ಸಭೆಯಲ್ಲಿ, ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಯವರನ್ನು ಹೊಗಳಿದ್ದೇ ಹೊಗಳಿದ್ದು, ಆದರೆ, ಮತದಾರ ಅದನ್ನು ಕಿವಿಗೇ ಹಾಕಿಕೊಂಡಿಲ್ಲ ಎನ್ನುವುದು ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ.