ಎನ್ ಟಿ ಆರ್ ಅವರ ಜೊತೆಯೆ ಇದ್ದು ಅವರಿಗೆ ದ್ರೋಹ ಬಗೆದವರ ಕತೆ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮ ಹೇಳಿದ್ದಾರೆ. ಹಾಗಾಗಿ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಇದನ್ನೆಲ್ಲಾ ನೋಡಿದ ಸಿಎಂ ಚಂದ್ರಬಾಬು ನಾಯ್ಡು ಅಭಿಮಾನಿಗಳು ಮತ್ತು ಟಿಡಿಪಿ ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ರಿಲೀಸ್ ಮಾಡಬಾರದು ಎಂದು ಎಚ್ಚರಿಕೆ ಕೊಡ್ತಿದ್ದಾರೆ. ಈ ಮಧ್ಯೆ ಸ್ವತಃ ಚಂದ್ರಬಾಬು ನಾಯ್ಡು ಅವರೇ ಆರ್.ಜಿ.ವಿಗೆ ಸಿನಿಮಾ ಬಿಡುಗಡೆ ಮಾಡದಂತೆ 50 ಕೋಟಿ ಆಫರ್ ಮಾಡಿದ್ರು ಎನ್ನುವ ಸುದ್ದಿ ಈಗ ಟಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ.
Andhra pradesh chief minister Chandrababu Naidu offered Rs 50 crore to Ram gopal varma to stop Lakshmi's NTR release.