Munirathna revealed a surprising fact about Ambareesh. Rebel star Ambareesh had not taken remuneration for Kurukshetra movie. He has acted as Bheeshma role in this movie.
ರೆಬೆಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಸಿನಿಮಾ ಕುರುಕ್ಷೇತ್ರ ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ದುರ್ಯೋಧನನಾಗಿ ನಟಿಸಿರುವ ಈ ಚಿತ್ರದಲ್ಲಿ ಅಂಬರೀಶ್ ಭೀಷ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೇ ಅಂಬಿ ಇದ್ದಾಗಲೇ ಈ ಚಿತ್ರ ತೆರೆಕಾಣಬೇಕಿತ್ತು. ಆದ್ರೆ, ಪೋಸ್ಟ್ ಪ್ರೊಡಕ್ಷನ್ ಕೆಲಸದ ವಿಳಂಬದಿಂದ ಸಾಧ್ಯವಾಗಿರಲಿಲ್ಲ. ಈಗ ಆಗಸ್ಟ್ 9 ರಂದು ಕುರುಕ್ಷೇತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷ ಅಂದ್ರೆ ಅಂಬರೀಶ್ ಅವರು ಈ ಸಿನಿಮಾದಲ್ಲಿ ಸಂಭಾವನೆ ಪಡೆಯದೇ ನಟಿಸಿದ್ದಾರಂತೆ. ಹೀಗಂತ ಸ್ವತಃ ನಿರ್ಮಾಪಕ ಮುನಿರತ್ನ ಅವರೇ ಬಹಿರಂಗಪಡಿಸಿದ್ದಾರೆ.