After miserable defeat in Lok Sabha elections by Congress, Karnataka leaders express their displeasure over coalition with JDS.
ಲೋಕಸಭೆಗೆ ಚುನಾವಣೆ ನಡೆದಿದ್ದರೂ ಅದರ ಪರಿಣಾಮ ಕೆಲವು ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳ ಮೇಲೆ ಬೀರಿದೆ ಎನ್ನುವುದನ್ನು ಇವತ್ತಿನ ಪರಿಸ್ಥಿತಿಗೆ ಅನುಗುಣವಾಗಿ ಒಪ್ಪಿಕೊಳ್ಳಲೇ ಬೇಕಾಗಿದೆ. ಈ ಪೈಕಿ ಕರ್ನಾಟಕದ ರಾಜಕೀಯ ಸ್ಥಿತಿ ಯಾವ ಮಟ್ಟಕ್ಕೆ ಬಂದು ನಿಲ್ಲಬಹುದು ಎಂಬುದು ಮಾತ್ರ ಊಹೆಗೆ ನಿಲುಕದಂತಾಗಿದೆ. ಹಾಗೆ ನೋಡಿದರೆ ರಾಜ್ಯ ಸರಕಾರ ಆಡಳಿತದ ಚುಕ್ಕಾಣಿ ಹಿಡಿದು ಒಂದು ವರ್ಷವನ್ನು ಪೂರೈಸಿದೆ. ಈ ಒಂದು ವರ್ಷದ ಅವಧಿಯಲ್ಲಿ ಬೇಕಾದಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಅತೃಪ್ತ ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇನ್ನೇನು ಸರಕಾರ ಬಿದ್ದೇ ಹೋಯಿತು ಎನ್ನುವಾಗಲೇ ಮತ್ತೆ ಮೈತ್ರಿ ಸರಕಾರ ಎದ್ದು ನಿಂತಿದೆ.