ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಂಸದ ಡಿವಿ ಸದಾನಂದ ಗೌಡ ಅವರು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮಾಡಿದ್ದ ಟ್ವೀಟ್ ಇನ್ನೂ ಚರ್ಚೆಯಲ್ಲಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, "ಚಕ್ರವರ್ತಿ ಸೂಲಿಬೆಲೆ ಅವರೊಬ್ಬ ಉತ್ತಮ ವಾಗ್ಮಿ. ಅವರನ್ನು ದೇಶದ್ರೋಹಿ ಎಂದು ಕರೆದಿರುವುದು ಸರಿಯಲ್ಲ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಒಬ್ಬ ಪ್ರಜೆಯಾಗಿ ದನಿ ಎತ್ತಿದ್ದಾರೆ. ಆದರೆ ಅವರಿಗೆ ಶಾಸಕರಾಗುವ ಅಥವಾ ಸಂಸದರಾಗುವ ಹುಚ್ಚಿಲ್ಲ" ಎಂದು ಬೆಂಬಲ ಸೂಚಿಸಿದ್ದಾರೆ.
Karnataka Flood Relief Issue: HD Deve Gowda Backs Chakravarty Sulibele,