ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ನೀಡ್ತಾರೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇರವಾಗಿ ಸುಮಲತಾರಿಗೆ ಬೆಂಬಲ ನೀಡಿತ್ತು. ಇತ್ತ ಕಾಂಗ್ರೆಸ್‍ನಲ್ಲಿದ್ದ ಚಲುವರಾಯಸ್ವಾಮಿ & ಟೀಂ ಸಹ ಪರೋಕ್ಷವಾಗಿ ಬೆಂಬಲ ನೀಡಿತ್ತು. ಹೀಗಾಗಿ ಯಾರಿಗೆ ಬೆಂಬಲ ನೀಡಬೇಕು ಎಂದು ಸುಮಲತಾ ಅಂಬರೀಶ್ ಧರ್ಮಸಂಕಟದಲ್ಲಿದ್ದಾರೆ ಎನ್ನಲಾಗಿದೆ.
Congress And Bjp Candidates Ask The Support From Sumalatha. Intrigued On Mandya MP's Move.