ಎಂಜಿ ಝಡ್‌ಎಸ್ ಇವಿ ಎಲೆಕ್ಟ್ರಿಕ್ ಎಸ್‌ಯುವಿ 2020 ರ ಜನವರಿಯಲ್ಲಿ ಬಿಡುಗಡೆಗೊಳಿಸುವ ಮುನ್ನ ಭಾರತದಲ್ಲಿ ಅನಾವರಣಗೊಳಿಸಲಾಗಿದೆ. ಎಂಜಿ ಝಡ್‌ಎಸ್ ಇವಿ ಎಲೆಕ್ಟ್ರಿಕ್ ಎಸ್‍ಯುವಿಯ ಬಗ್ಗೆ ಮಾಹಿತಿ ಇಲ್ಲಿದೆ.
ಈ ಎಲೆಕ್ಟ್ರಿಕ್ ಕಾರಿನಲ್ಲಿ 44.5 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿರುವ ಮೋಟಾರ್ 141 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಬ್ಯಾಟರಿಯನ್ನು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 340 ಕಿ.ಮೀ ಚಲಿಸುತ್ತದೆ. ಈ ಕಾರು ಹಲವಾರು ಪ್ರೀಮಿಯಂ ಫೀಚರ್‍ಗಳನ್ನು ಹೊಂದಿದೆ. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.