ಕೋವಿಡ್ 19 ಹರಡುತ್ತಿರುವ ರೀತಿ ನೋಡುತ್ತಿದ್ದರೆ ಜನರು ತುಂಬಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಮಾತ್ರ ಕೊರೊನಾವೈರಸ್ ಸೋಂಕು ತಡೆಗಟ್ಟಲು ಸಾಧ್ಯ. ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಭಾರತದಲ್ಲಿ ಸುಮಾರು 80 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲು ಮುಂದಾಗಿದೆ.
ಕರ್ನಾಟಕದಲ್ಲಿ ಈಗಾಗಲೇ 9 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದ್ದು, ಪರಿಸ್ಥಿತಿ ನಿಭಾಯಿಸಲು ಕರ್ನಾಟಕವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲು ಸರಕಾರ ಮುಂದಾಗಿದೆ. ಅದಲ್ಲದೆ 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ.
ಅಲ್ಲದೆ ಕರ್ನಾಟಕ ಸಾರಿಗೆ ಇಲಾಖೆ ಕೂಡ ಮಧುಮೇಹ ಕಾಯಿಲೆ ಇರುವ ಸಿಬ್ಬಂದಿಗಳಿಗೆ ರಜೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಮಧುಮೇಹಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಏಕೆಂದರೆ ಕೊರೊನಾವೈರಸ್ ಮಧುಮೇಹಿಗಳಿಗೆ ಸೋಂಕಿದರೆ ಪರಿಸ್ಥಿತಿ ತುಂಬಾ ಗಂಭೀರವಾಗುವುದು. ಇಲ್ಲಿ ಮಧುಮೇಹಿಗಳು ಕೊರೊನಾ ಸೋಂಕು ತಡೆಗಟ್ಟಲು ಏನು ಮಾಡಬೇಕೆಂದು ಟಿಪ್ಸ್ ನೀಡಿದ್ದೇವೆ ನೋಡಿ: