ಹೋಂಡಾ ಕಂಪನಿಯು ತನ್ನ ಪ್ರೀಮಿಯಂ ಬೈಕ್ ಮಾದರಿಯಾದ ಹೈನೆಸ್ ಸಿಬಿ350 ಆವೃತ್ತಿಯಲ್ಲಿ ಮೊದಲ ವರ್ಷದ ಸಂಭ್ರಮಕ್ಕಾಗಿ ಆ್ಯನಿವರ್ಸರಿ ಎಡಿಷನ್ ಅನ್ನು 2021ರ ಇಂಡಿಯಾ ಬೈಕ್ ವೀಕ್‌ನಲ್ಲಿ ಬಿಡುಗಡೆ ಮಾಡಿದೆ. ಹೊಸ ಬೈಕ್ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 2.03 ಲಕ್ಷ ಬೆಲೆ ಹೊಂದಿದ್ದು, ಹೊಸ ಮೋಟಾರ್‌ಸೈಕಲ್ ಅನ್ನು ಇಗ್ನಿಯಸ್ ಬ್ಲಾಕ್ ಮತ್ತು ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಬಣ್ಣಗಳೊಂದಿಗೆ ಪರಿಚಯಿಸಲಾಗಿದೆ. ಹಾಗಾದ್ರೆ ಹೊಸ ಬೈಕ್ ಕುರಿತಾಗಿ ಮತ್ತಷ್ಟು ಮಾಹಿತಿ ತಿಳಿಯಲು ಈ ವಿಡಿಯೋ ವೀಕ್ಷಿಸಿ.