ಅನ್ನ ಭಾಗ್ಯ ಅಕ್ಕಿ ಕಳ್ಳರನ್ನು ಬಂಧಿಸಲು ಒತ್ತಾಯ
ರಾಯಚೂರು: ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಲ್ಲಿ ಭ್ರಚ್ಟಾಚಾರ ನಡೆಸುತ್ತಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕು ಮತ್ತು ಪತ್ರಕರ್ತರು ಮತ್ತು ಹೋರಾಟಗಾರರ ಮೇಲೆ ಹಾಕಿರುವ ಸುಳ್ಳು ಕೇಸ್ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮಾನ್ವಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.