ತಡರಾತ್ರಿ ಬೆಂಗಳೂರಿನಲ್ಲಿ ಕೂದಲೆಳೆ ಅಂತರದಲ್ಲೇ ಭಾರೀ ಅನಾಹುತವೊಂದು ತಪ್ಪಿದೆ. ದೇವೇಗೌಡ ಪೆಟ್ರೋಲ್ ಸಮೀಪ ಕಾರು ಡಿವೈಡರ್‌ಗೆ ಡಿಕ್ಕಿ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.. ಘಟನೆ ಬಳಿಕ ಸ್ಥಳದಲ್ಲೇ ಕಾರನ್ನು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕಾರು ಹೈಕರ‍್ಟ್ನ ವಕೀಲರೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬನಶಂಕರಿ ಸಂಚಾರಿ ಪೊಲೀಸರು ಹಾಗೂ ಹೊಯ್ಸಳದವರು ಬೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಸ್ಥಳದಿಂದ ಕಾರನ್ನು ತರುವಂತೆ ಚಾಲಕ ತನ್ನ ಸ್ನೇಹಿತರನ್ನು ಕಳಿಸಿದ್ದನಂತೆ..
ಚಿತ್ರದುರ್ಗ ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಬೀಕರ ಅಪಘಾತ ಸಂಭವಿಸಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅUಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿ ಇದ್ದರು.. ಇವರು ಬೆಂಗಳೂರಿನಿAದ ದಾವಣಗೆರೆ, ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರವಿಚಂದ್ರ, ವಿಜಯ್ ಕುಮಾರ್ ಇಬ್ಬರ ಗುರುತು ಪತ್ತೆ ಆಗಿದ್ದು, 59 ವರ್ಷದ ಮಹಿಳೆಯ ಹೆಸರು ಪತ್ತೆ ಆಗಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ರೋಷರ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ಪರಿಶೀಲನೆ ನಡೆಸಿದ್ರು. ಸದ್ಯ ಅಪಘಾತ ಐಮಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#PublicTV #Bengaluru #Chitradurga