ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಮೃತಪಟ್ಟಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 17 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ತಾಲೂಕಿನ ವೈ ಎನ್.ಹೊಸಕೋಟೆಯಿಂದ ಪಾವಗಡದ ಕಡೆ ಆಗಮಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಲೇ ಬಸ್ ಚಾಲನೆ ಮಾಡಿದ್ದು, ಅತಿವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ.