Trishul Deeksha Row: Siddaramaiah Demands Arrest Of Bhajartangadal Leaders

Public TV 2022-05-17

Views 2

ಮಡಿಕೇರಿಯ ಶಾಲಾ ಆವರಣದಲ್ಲಿ ಯುವ ಜನರಿಗೆ ಶಸ್ತ್ರ ತರಬೇತಿ ವಿಚಾರಕ್ಕೆ ಸಂಬಂಧಿಸಿದಂತೆ ಭಜರಂಗದಳ ನಾಯಕರ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮಡಿಕೇರಿಯ ಶಾಲೆಯಲ್ಲಿ ಭಜರಂಗದಳ ಯುವಜನರಿಗೆ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ..? ಶಾಸಕರಾದ ಎಂ.ಎ. ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ? ಶಸ್ತ್ರಾಸ್ತ್ರ ತರಬೇತಿ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಭಜರಂಗ ದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು. ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕ್ರಮಕೈಗೊಳ್ಳಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮ ಸೇನೆ ಭಜರಂಗ ದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು, ರಾಜ್ಯದ ಬಿಜೆಪಿ ಸರ್ಕಾರ ಭಜರಂಗದಳ, ಶ್ರೀರಾಮಸೇನೆಯಂತಹ ಕೋಮುವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

#PublicTV #TrishulDeeksha #Kodagu #Siddaramaiah

Share This Video


Download

  
Report form
RELATED VIDEOS