News Cafe | ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ..! | HR Ranganath | May 24, 2022

Public TV 2022-05-24

Views 2

ಹುಬ್ಬಳ್ಳಿ ಹೊರವಲಯದ ತಾರಿಹಾಳ ಬೈಪಾಸ್‍ನಲ್ಲಿ ಮಧ್ಯರಾತ್ರಿ 12.30ಕ್ಕೆ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿ ಸ್ಥಳದಲ್ಲಿ 6 ಜನ, ಕಿಮ್ಸ್‍ನಲ್ಲಿ 2 ಸೇರಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. 26 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ ಹೊರಟಿದ್ದ ಲಾರಿ ನಡುವೆ ನೇರಾನೇರಾ ಅಪಘಾತವಾಗಿದೆ. ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಹೋದ ಲಾರಿ ಡ್ರೈವರ್ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರದವರಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

#PublicTV #HRRanganath #NewsCafe

Share This Video


Download

  
Report form
RELATED VIDEOS