ಈಗಾಗಲೇ ರಾಜ್ಯದ ಕರಾವಳಿ ಮತ್ತು ಮಲೆನಾಡಿಗೆ ಮುಂಗಾರು ಮಳೆ ಪ್ರವೇಶಿಸಿದೆ. ಆದರೆ, ಕಳೆದ ವಾರದಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ರಿಂದ ರಾಜ್ಯದ ಅನೇಕ ಭಾಗಗಳಿಗೆ ಮುಂಗಾರು ಮಳೆ ತಡವಾಗಿ ಪ್ರವೇಶಿಸಲಿದೆ. ಮುಂದಿನ ಮೂರು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಒಳನಾಡಿಗೆ ನಾಳೆ ಮುಂಗಾರು ಮಳೆ ಪ್ರವೇಶಿಸಲಿದ್ದು.. ಜೂನ್ 16ಕ್ಕೆ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು ಹಾಸನ ಶಿವಮೊಗ್ಗ, ಗದಗ ಯಾದಗರಿ ಸೇರಿದಂತೆ ಹಲವೆಡೆ ಜೋರು ಮಳೆ ಬಗ್ಗೆ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಇದೆ.
#publictv #newscafe #hrranganath