2 ಶಿಕ್ಷಕ. 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಮೂರು ಪಕ್ಷಗಳಿಂದ ಪಟ್ಟು 49 ಅಭ್ಯರ್ಥಿಗಳ ಭವಿಷ್ಯ ಇಂದು ಗೊತ್ತಾಗಲಿದೆ. ದಕ್ಷಿಣ ಪದವೀಧರ ಕ್ಷೇತ್ರವಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ವಾಯವ್ಯ ಪದವೀಧರ ಕ್ಷೇತ್ರವಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವಾದ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡದಲ್ಲಿ ಚುನಾವಣೆ ನಡೆದಿತ್ತು. ದಕ್ಷಿಣ ಪದವೀಧರ ಕ್ಷೇತದ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿಗಾಗಿ ಕಾಯುತ್ತಿದ್ದರೆ.. ಜೆಡಿಎಸ್ ಸ್ಥಾನ ಉಳಿಸಿಕೊಳ್ಳಲು, ಬಿಜೆಪಿ ಮರಳಿ ಕ್ಷೇತ್ರ ಪಡೆಯಲು ಹವಣಿಸುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಬಸವರಾಜ ಹೊರಟ್ಟಿ ಭವಿಷ್ಯವೂ ನಿರ್ಧಾರವಾಗಲಿದೆ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪರ ಹಣ ಹಂಚಿಕೆಯೂ ಜೋರಾಗಿತ್ತು. ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಲಿದ್ದು.. ಎಣಿಕೆ ಕೇಂದ್ರಗಳ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
#publictv #newscafe #hrranganath