ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಕುವೆಂಪು ಹುಟ್ಟೂರು ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆ ಆರಂಭವಾಗಿದ್ದು, 11 ಗಂಟೆಗೆ ತೀರ್ಥಹಳ್ಳಿಯವರೆಗೆ ನಡೆಯಲಿದೆ. ಪುಸ್ತಕ ಪರಿಷ್ಕರಣೆಯಲ್ಲಿ ಕುವೆಂಪುರವರಿಗೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೀತಿದೆ. ಸಾಹಿತಿಗಳು, ಚಿಂತಕರು, ಪ್ರಗತಿಪರರು, ವಿವಿಧ ಸಂಘ ಸಂಸ್ಥೆಯ ಮುಖಂಡರು ಭಾಗಿಯಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬೃಹತ್ ಸಮಾವೇಶ ಸಹ ನಡೆಯಲಿದ್ದು, ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರು ಪಠ್ಯ ಕೈಬಿಡುವಂತೆ, ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಜಾರಿಯಾಗಿರುವ ಪಠ್ಯ ಪುಸ್ತಕವನ್ನೇ ಮುಂದುವರಿಸುವಂತೆ ಆಗ್ರಹಿಸಲಿದೆ. ಸಮಾರೋಪದಲ್ಲಿ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ಸಹ ಭಾಗಿ ಆಗಲಿದ್ದಾರೆ.
#publictv #newscafe #hrranganath