ಇದೇ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ-20 ಪಂದ್ಯ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ. ದೂರದ ನಿಲ್ದಾಣಗಳಿಗೆ ವ್ಯವಸ್ಥಿತ ಬಸ್ ಸಂಚಾರಕ್ಕೆ ಸಿದ್ದತೆ ಮಾಡಿಕೊಂಡಿದೆ. ಮಧ್ಯಾಹ್ನ 3 ಗಂಟೆಯಿಂದ ಪಂದ್ಯ ಮುಗಿಯುವವರೆಗೂ ಬಿಎಂಟಿಸಿ ಸೇವೆ ಇರಲಿದೆ. ಇನ್ನು ಮೆಟ್ರೋ ಸಂಚಾರ ಅವಧಿ ವಿಸ್ತರಣೆಯಾಗಿದೆ. ರಾತ್ರಿ 1.30 ರವರೆಗೆ ಮೆಟ್ರೋ ಸಂಚಾರ ವಿಸ್ತರಣೆ ಮಾಡಲಾಗಿದೆ. ಎಲ್ಲಾ ನಿಲ್ದಾಣಗಳಿಂದ 50 ರೂಪಾಯಿ ಟಿಕೆಟ್ ವ್ಯವಸ್ಥೆ ಇರಲಿದೆ.
#publictv #nammametro #indiavssouthafrica