ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಪ್ರಾರಂಭವಾಗಿದ್ದು ಒಂದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ ನಗರ ಭಾಗದಲ್ಲಿ ಹಲವು ಪ್ರದೇಶದ ರಸ್ತೆಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕುಮಟಾದಲ್ಲಿ ಹೆದ್ದಾರಿ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಇನ್ನು ಕಾರವಾರ ತಾಲೂಕಿನ ಕೊಡಸಳ್ಳಿ ಜಲಾಶಯದ ಭಾಗದಲ್ಲಿ ಈ ಹಿಂದೆ ಗುಡ್ಡ ಕುಸಿದಿದ್ದು ಇದೀಗ ಮತ್ತೆ ಗುಡ್ಡ ಕುಸಿಯುವ ಆತಂಕ ತಂದೊಡ್ಡಿದೆ. ನಿರಂತರವಾಗಿ ಅಬ್ಬರದ ಮಳೆ ಸುರಿಯುತಿದ್ದರಿಂದಾಗಿ ಅರಬ್ಬಿ ಸಮುದ್ರದಲ್ಲಿ ಆಳೆತ್ತರ ಅಲೆಗಳು ಏಳತೊಡಗಿದ್ದು, ಹಲವು ಭಾಗದಲ್ಲಿ ಸಮುದ್ರ ಕೊರೆತ ಪ್ರಾರಂಭವಾಗಿದೆ. ಸಾರ್ವಜನಿಕರು ಸಮುದ್ರ, ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಮಳೆಯಬ್ಬರ ಜೋರಾಗಿದೆ. ಇನ್ನು 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಸಿದೆ.
#publictv #newscafe #rain