ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯ ಅಕ್ರಮ ಪ್ರಕರಣದ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳು ಸೇರಿ ನಾಲ್ವರ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು ಪ್ರಕರಣದಲ್ಲಿ ಪ್ರಶ್ನೆಪತ್ರಿಕೆ ಹೇಗೆ ಸೋರಿಕೆ ಅಯ್ತು ಅನ್ನೋದ್ರ ಬಗ್ಗೆ ತನಿಖೆ ಮಾಡಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದ ಮೇಲೆ ಮಲ್ಲೇಶ್ವರಂ ಪೊಲೀಸರು ಸೌಮ್ಯ ಹಾಗೂ ಡಾ.ನಾಗರಾಜ್ ಎಂಬುವರನ್ನ ಬಂಧಿಸಿ ತನಿಖೆ ಮಾಡಲಾಗಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ಪ್ರಕರಣದ ತನಿಖೆ ಸಿಸಿಬಿಗೆ ವಹಿಸಲಾಗಿತ್ತು.ಪ್ರಕರಣ ತನಿಖೆ ನಡೆಸಿರೋ ಸಿಸಿಬಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
#publictv #newscafe #hrranganath