ಬೆಂಗಳೂರಿನಲ್ಲಿ ತಡರಾತ್ರಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕುಡುಕನೋರ್ವ ಟ್ರಾಫಿಕ್ ಸಿಬ್ಬಂದಿಗೆ ಅವಾಜ್ ಹಾಕಿದ್ದಾನೆ. ಹಲಸೂರ್ ಪೊಲೀಸ್ ಠಾಣೆ ಮುಂದೆ ತಪಾಸಣೆ ವೇಳೆ ಕುಡಿದು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಆತನಿಗೆ ಟ್ರಾಫಿಕ್ ಸಿಬ್ಬಂದಿ ಗಾಡಿ ಸೈಡಿಗೆ ಹಾಕುವಂತೆ ಹೇಳಿದ್ದಾರೆ. ಅಷ್ಟಕ್ಕೇ ಆತ ಟ್ರಾಫಿಕ್ ಸಿಬ್ಬಂದಿಯನ್ನು ನಾಯಿಗೆ ಹೋಲಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ. ಬಳಿಕ ಆತನಿಂದ ದಂಡ ಕಟ್ಟಿಸಿಕೊಂಡು ಬಿಟ್ಟು ಕಳಿಸಿದ್ದಾರೆ.
#publictv #bengaluru